ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಪರಿಣಾಮ ಹೆಚ್ಚಾಗಿದ್ದು, ಇನಷ್ಟು ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಬರುವ ದಿನಗಳಲ್ಲಿ ಬಿಸಿಲಿನ ತಾಪಮಾನ ಇನ್ನೂ ಹೆಚ್ಚಾಗಲಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ತಾಪಮಾನ ಏರಿಕೆಯಾಗಲಿದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ. ಚಾಮರಾಜನಗರದಲ್ಲಿ 13.2 ರಷ್ಟು ಡಿಗ್ರಿ ಸೆಲ್ಸಿಯಸ್ ಇದ್ದು ಅತ್ಯಂತ ಕನಿಷ್ಠ ಉಷ್ಣಾಂಶ ಇರುವ ನಗರವಾಗಲಿದೆ. ಕಾರವಾರದಲ್ಲಿ ಗರಿಷ್ಠ 37 ಇರಲಿದ್ದು, 21 ಕಿನಿಷ್ಠ ಉಷ್ಣಾಂಶ ಇರಲಿದ್ದು ಬೇರೆ ಜಾಗಗಳಿಗೆ ಹೋಲಿಸಿದರೆ ಅತೀ ಹೆಚ್ಚು ಉಷ್ಣಾಂಶ ಇರಲಿದೆ. ಹಾಗೇಯೇ ರಾಯಚೂರು ಮತ್ತು ಶಿವಮೊಗ್ಗದಲ್ಲಿ 35 ಗರಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.