ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಿನ್ನೆ ಅಂದರೆ ಗುರುವಾರ ಸಾರ್ವತ್ರಿಕ ಚುನಾವಣೆ ನಡೆದಿದೆ. ಈ ವೇಳೆ ಭಯೋತ್ಪಾದಕರು ದಾಳಿ ನಡೆಸಿದ್ದು ದಾಳಿಯಲ್ಲಿ 10 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 12 ಜನರು ನಿಧನರಾಗಿದ್ದಾರೆ.
ಆದರೆ ಮತದಾನಕ್ಕೆ ಅಡ್ಡಿಪಡಿಸುವ ಭಯೋತ್ಪಾದಕರ 51 ದಾಳಿಗಳನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ದಾಳಿಗಳಲ್ಲಿ ಹೆಚ್ಚಿನವು ಖೈಬರ್-ಪಖ್ತುಂಖ್ವಾ ಮತ್ತು ಬಲೂಚಿಸ್ತಾನ್ ಪ್ರಾಂತ್ಯಗಳಲ್ಲಿ ನಡೆದಿವೆ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರೂ ಹತರಾಗಿದ್ದಾರೆ ಎಂದು ಸೇನೆ ಹೇಳಿಕೆ ಬಿಡುಗಡೆ ಮಾಡಿದೆ.
ಳಿಯಲ್ಲಿ ಭದ್ರತಾ ಪಡೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ 10 ಸಿಬ್ಬಂದಿ ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಮತ್ತು 39 ಮಂದಿ ಗಾಯಗೊಂಡಿದ್ದಾರೆ ಎಂದು ಸೇನೆ ಮಾಹಿತಿ ಹಂಚಿಕೊಂಡಿದೆ.