ಬೆಂಗಳೂರು:- ಸರಗಳ್ಳತನ ಪ್ರಕರಣಗಳು ಆನೇಕಲ್ ತಾಲ್ಲೂಕಿನಲ್ಲಿ ಮುಂದುವರಿದಿದ್ದು, ಕಾಚನಾಯಕನಹಳ್ಳಿ ಬಳಿ ನಿನ್ನೆ ರಾತ್ರಿ ಸರಗಳ್ಳರು ಮಾಂಗಲ್ಯ ಸರ ಎಗರಿಸಿದ್ದಾರೆ.
ಮಾನಸ ಎಂಬುವವರಿಗೆ ಸೇರಿದ ಸುಮಾರು 3 ಲಕ್ಷ ಮೌಲ್ಯದ 50 ಗ್ರಾಂ ಚಿನ್ನದ ಸರ ಇದಾಗಿದ್ದು, ಬೈಕ್ನಲ್ಲಿ ಬಂದಿದ್ದ ಇಬ್ಬರು ಅಸಾಮಿಗಳು ಈ ಕೃತ್ಯ ಎಸಗಿದ್ದಾರೆ. ನಿನ್ನೆ ರಾತ್ರಿ 9:30 ರ ಸುಮಾರಿಗೆ ಅಂಗಡಿಯಲ್ಲಿ ಪೆನ್ ಖರೀದಿಸುವ ನೆಪದಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ಧರಿಸಿ ಬಂದಿದ್ದ ಖದೀಮರು, ಕ್ಷಣಾರ್ಧದಲ್ಲಿ ಬಂದು ಕೈ ಚಳಕ ತೋರಿಸಿದ್ದಾರೆ. ಖದೀಮರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.