ನವದೆಹಲಿ:- ಶಕ್ತಿ ಯೋಜನೆಗೆ ಪ್ರತಿಷ್ಟಿತ SKOCH ಪ್ರಶಸ್ತಿ ಒಲಿದು ಬಂದಿದೆ. ಇತ್ತೀಚೆಗಷ್ಟೇ, ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತನ್ನ ಸಿಬ್ಬಂದಿಗಳಿಗಾಗಿ 1 ಕೋಟಿ ಸಾರಿಗೆ ಸುರಕ್ಷಾ ವಿಮಾ ಯೋಜನೆ ಜಾರಿ ಮಾಡಿದ ಕೆಎಸ್ಆರ್ಟಿಸಿಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ ಬೆನ್ನಲ್ಲೇ ಈ ಪ್ರಶಸ್ತಿ ಒಲಿದುಬಂದಿದೆ.
ಸ್ಕಾಚ್ ಸಂಸ್ಥೆಯು ದೆಹಲಿಯ ಕಾನ್ಸ್ಟಿಟ್ಯುಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸ್ಕಾಚ್ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಸಮೀರ್ ಕೊಚ್ಚರ್ ಹಾಗೂ ಉಪಾಧ್ಯಕ್ಷ ಗುರುಶರಣ್ ಅವರು ನಿಗಮಕ್ಕೆ ಸ್ಕಾಚ್ನ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು. ಕೆಎಸ್ಆರ್ಟಿಸಿ ಉಪ ಮುಖ್ಯ ಲೆಕ್ಕಾಧಿಕಾರಿ ವೈ.ಕೆ ಪ್ರಕಾಶ್ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.