ಬೆಂಗಳೂರು:- ಟಿಕೆಟ್ ರಹಿತ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಬಿಸಿ ಮುಟ್ಟಿಸಿದ್ದು, ಪ್ರಯಾಣಿಕರಿಂದ ಬರೋಬ್ಬರಿ 5,71,286 ರೂ. ದಂಡ ವಸೂಲಿ ಮಾಡಿದೆ.
ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44521 ವಾಹನಗಳನ್ನು ತನಿಖೆಗೊಳಪಡಿಸಿ 3391 ಪ್ರಕರಣಗಳನ್ನು ಪತ್ತೆಹಚ್ಚಿದ್ದು, 3712 ಟಿಕೆಟ್ ರಹಿತ ಪ್ರಯಾಣಿಕರಿಂದ 5.71.286 ರೂ. ದಂಡದ ರೂಪದಲ್ಲಿ ವಸೂಲಿ ಮಾಡಿದ್ದಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 81,583 ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಹಾಗೂ ತಪ್ಪಿತಸ್ಥರ ವಿರುದ್ಧ ಇಲಾಖೆ ಸೂಕ್ತ ಕ್ರಮವನ್ನು ಜರುಗಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್, ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಪ್ರಯಾಣಿಕರಲ್ಲಿ ಕೋರಿದೆ.
ಇತ್ತೀಚೆಗೆ ಕೆಎಸ್ಆರ್ಟಿಸಿಗೆ ಮತ್ತೆ ಪ್ರತಿಷ್ಠಿತ SKOCH ಪ್ರಶಸ್ತಿ ಒಲಿದುಬಂದಿತ್ತು. ಕಾರ್ಮಿಕ ಕಲ್ಯಾಣ, ಶಕ್ತಿ ಯೋಜನೆಗಳಿಗೆ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಇತ್ತೀಚೆಗಷ್ಟೇ, ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತನ್ನ ಸಿಬ್ಬಂದಿಗಳಿಗಾಗಿ 1 ಕೋಟಿ ಸಾರಿಗೆ ಸುರಕ್ಷಾ ವಿಮಾ ಯೋಜನೆ ಜಾರಿ ಮಾಡಿದ ಕೆಎಸ್ಆರ್ಟಿಸಿಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ ಬೆನ್ನಲ್ಲೇ ಈ ಪ್ರಶಸ್ತಿ ಒಲಿದುಬಂದಿತ್ತು.