ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿದ್ದು, ಸದ್ಯಕ್ಕೆ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
ದೇವೇಗೌಡರಿಗೆ ಇಂದು ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡೊ ಹೋಗಿ ಅಲ್ಲಿ ಅಡ್ಮಿಟ್ ಮಾಡಲಾಗಿದೆ.
ಎಚ್ಡಿ ದೇವೇಗೌಡ ಅವರಿಗೆ 90 ವರ್ಷ ಪೂರ್ಣಗೊಂಡಿವೆ. ಆದರೂ ಸಹ ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ.