ನಮ್ಮ ಮೆಟ್ರೋ ರೈಲಿನ ಜನಪ್ರಿಯತೆಯಿಂದಾಗಿ ರಾಜಧಾನಿ ಬೆಂಗಳೂರಿನ ಹೊರಗೂ ಮೆಟ್ರೋ ರೈಲು ಸಂಪರ್ಕ ಸಾಧ್ಯತೆ ಮುನ್ನೆಲೆಗೆ ಬಂದಿದೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಮೆಟ್ರೋ ಮಾರ್ಗಗಳನ್ನು ಆರಂಭಿಸಲು ಕರ್ಯಸಾಧ್ಯತಾ ವರದಿ ತಯಾರಿಗೆ ಮುಂದಾಗಿದ್ದಾರೆ. ಒಂದು ವೇಳೆ ಓಕೆ ಆದರೆ ಬೆಂಗಳೂರಿನ ಬಿಐಇಸಿಯಿಂದ ತುಮಕೂರಿಗೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಗೆ ಮೆಟ್ರೋ ಸಂಚಾರ ಶುರುವಾಗಬಹುದು. ಸರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ವರದಿ ತಯಾರಿಸುವುದಾಗಿ ಸಿಎಂ ಘೋಷಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೆಟ್ರೋ ರೈಲು ಕರ್ಯಾಚರಣೆಯು ಲಾಭದಾಯಕವಾಗಿದ್ದು, ಹೆಮ್ಮೆಯ ಸಂಕೇತ ಎಂದು ಸಿಎಂ ಹೇಳಿಕೊಂಡಿದ್ದಾರೆ