ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಹಾಗೂ ಇಂಟರ್ನೆಟ್ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು
ರಾಜ್ಯದ 20 ಸಾವಿರ ಸೈನ್ಸ್ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ. ಒದಗಿಸಲಾಗುವುದು. ಜೈನ್ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.