ಬೆಂಗಳೂರಿನ 4 ಸ್ಥಳಗಳಲ್ಲಿ ಹೈಟೆಕ್ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಕ್ರೀಡಾನಗರ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ.
70 ಎಕರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾನಗರ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ರಾಜ್ಯದ 14 ವರ್ಷದ ಕ್ರೀಡಾಪಟುಗಳಿಗೆ ಮಿನಿ ಒಲಿಂಪಿಕ್ಸ್ ಆಯೋಜನೆ ಮಾಡಲಾಗುವುದು.
ರಾಜ್ಯದ ಕ್ರೀಡಾಪಟುಗಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗುವುದು. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ವಿಮೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.