ಬೆಂಗಳೂರು: ನಮ್ಮ ಕರಾವಳಿ ಉತ್ಸವಕ್ಕೆ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಎಂದು ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಪೂರ್ವಭಾವಿಯಾಗಿ ಸುದ್ದಿಗೋಷ್ಟಿ ನಡೆಸಿದ ಕರಾವಳಿ ಒಕ್ಕೂಟ ಬೆಂಗಳೂರಿನ ಅದ್ಯಕ್ಷ ಕೆ. ಸುಬ್ರಾಯ ಭಟ್ ಹೇಳಿದ್ದಾರೆ. ಬೆಂಗಳೂರಿನ ಜೆ.ಪಿ ನಗರದ ಆರ್ ಬಿ ಐ ಲೇಔಟ್ ಬಿಬಿಎಂಪಿ ಆಟದ ಮೈದಾನದಲ್ಲಿ ನಮ್ಮ ಕರಾವಳಿ ಉತ್ಸವ ಆಯೋಜಿಸಲಾಗಿದೆ.
ಕರಾವಳಿಗರ ಒಕ್ಕೂಟ (ರಿ)ಬೆಂಗಳೂರು ಇವರ ನೇತೃತ್ವದಲ್ಲಿ ಫೆಬ್ರವರಿ 25ರ ಭಾನುವಾರ ನಮ್ಮ ಕರಾವಳಿ ಉತ್ಸವ ನಡೆಯಲಿದೆ. ಈ ಉತ್ಸವದಲ್ಲಿ ಕರಾವಳಿಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನು ಹಂದಾಡಿ ಯವರಿಂದ ನಗೆ ಹಬ್ಬ, ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಮೂಡಬಿದ್ರೆ ಇವರ ನಗೆ ಬುಗ್ಗೆ, ಅಂಭಾಭವಾನಿ ಮರಾಠಿ ಸಾಂಸ್ಕೃತಿಕ ಕಲಾ ವೇದಿಕೆ (ರಿ) ಪರ್ಕಳ ಇವರಿಂದ ಕರಾವಳಿ ಕಲಾ ವೈಭವ, ಹುಲಿ ಕುಣಿತ,
ಭೂತಾರಾಧನೆ, ಹುಲಿ ಕುಣಿತ,ಯಕ್ಷಗಾನ, ಅಹಾರ,ಆಚಾರ ವಿಚಾರವನ್ನು ಹೆಚ್ಚಿನ ಬೆಂಗಳೂರಿನ ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದ್ದು ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ.ಹಾಗೇ ಬೆಳಗ್ಗೆ ೯ ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ರಾತ್ರಿಯವರೆಗೂ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಬಿ ಆರ್ ದೇವಾಡಿಗ,ಮಂಜುನಾಥ್ ಸಿ, ಸಂಘಟನಾ ಕಾರ್ಯದರ್ಶಿ ಸುರೇಶ್ ಪೈ ಸೇರಿ ಹಲವರು ಉಪಸ್ಥಿತರಿದ್ದರು.