ಬೆಂಗಳೂರು: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇದಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಭಾರತದ ಸಂವಿಧಾನ ಜಾರಿಗೆ ಬಂದು 75 ನೇ ವರ್ಷಕ್ಕೆ ಕಾಲಿಟ್ಟಿದೆ. 75 ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಜನವರಿ 26 ರಿಂದ ಫೆ. 23ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿಗಳು ರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಹೆಸರಾಂತ ಭಾಷಣಕಾರರು, ಖ್ಯಾತ ಚಿಂತಕರಾದ ಪ್ರೊ: ಅಸುತೋಶ್ ವರ್ಶನಿ ಹಾಗೂ ಡಾ: ಗಣೇಶ್ ದೇವಿ, ಪ್ರೊ. ಜಯಂತಿ ಘೋಷ್, ಪ್ರೊ. ಸುಖದೇವ್ ಥೋರಟ್, ಪ್ರೊ, ಕಾಂಚಾ, ಪ್ರಶಾಂತ್ ಭೂಷಣ್, ಬಿಜುವಾಡ ವಿಲ್ಸನ್ , ಮೇಧಾ ಪಾಟ್ಕರ್ ಮುಂತಾದ ಅನೇಕ ಚಿಂತಕರು ಮೇಧಾವಿಗಳು ಈ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ. ದೇಶದ ಸಮಸ್ಯೆಗಳು, ಜನರ ಬವಣೆಗಳು,
ಸಂವಿಧಾನದಲ್ಲಿ ಅದಕ್ಕೆ ಪರಿಹಾರಗಳ ಬಗ್ಗೆ ಬೆಳಕು ಚೆಲ್ಲಲಿದ್ದಾರೆ. 24 ರಂದು ಉದ್ಘಾಟನೆ ನಡೆದು 25 ರಂದು ಬೃಹತ್ ರ್ಯಾಲಿ ನಡೆಯಲಿದೆ. ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪಿಠಿಕೆಯನ್ನು ಓದಿಸಲಾಗುತ್ತಿದೆ. ಸಂವಿಧಾನ ರಚನೆಯಾದ ನಂತರ ಮೊದಲನೇ ಬಾರಿಗೆ ಬಜೆಟ್ ಪುಸ್ತಕದ ಮುಖಪುಟದಲ್ಲಿ ಪೀಠಿಕೆಯನ್ನು ಮುದ್ರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.