ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ರಾಜರಾಜೇಶ್ವರಿ ನಗರ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಜ್ಞಾನಭಾರತಿ BP Ed ಮೈದಾನದಲ್ಲಿ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಈ ವೇಳೆ ಸ್ಥಳೀಯ ಶಾಸಕರಾದ ಶ್ರೀ ಮುನಿರತ್ನ, ಶ್ರೀ ಎಸ್.ಟಿ ಸೋಮಶೇಖರ್, ಸಂಸದರಾದ ಶ್ರೀ ಡಿ.ಕೆ ಸುರೇಶ್, ಮಾಜಿ ರಾಜ್ಯಸಭಾ ಸದಸ್ಯರಾದ ರಾಜೀವ್ ಗೌಡ, ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಬಿಡಿಎ ಆಯುಕ್ತರಾದ ಜಯರಾಮ್, ಜಲಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ ರಾಮ್ ಪ್ರಸಾತ್ ಮನೋಹರ್, ವಲಯ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.