ಸಾಕಷ್ಟು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಕೂಡ ಮೊದಲನೇ ಕಂತಿನ ಹಣವೇ ಬಂದಿಲ್ಲ. ಹಾಗೂ ಬಹಳಷ್ಟು ಜನರಿಗೆ ಎರಡನೇ ಮತ್ತು ಮೂರನೇ ಕಂತಿನ ಹಣ ಪೆಂಡಿಂಗ್ ಇದೆ. ಈ ರೀತಿಯ ಸಮಸ್ಯೆ ಇರುವ ಎಲ್ಲಾ ಫಲಾನುಭವಿಗಳಿಗೆ ಸರ್ಕಾರ ಪೆಂಡಿಂಗ್ ಇರುವ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗದಿರಲು ಕಾರಣ:
ಇಲ್ಲಿಯವರೆಗೂ ಬಹಳಷ್ಟು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಎಲ್ಲ ಕಂತಿನ ಹಣ ಅವರ ಬ್ಯಾಂಕ್ ಖಾತೆ(Bank account)ಗೆ ಜಮಾ ಆಗಿದೆ. ಹಾಗೆಯೇ ಇನ್ನು ಅಲ್ಪ ಸಂಖ್ಯೆಯ ಮಹಿಳೆಯರ ಖಾತೆಗೆ ಕೆಲವು ಕಂತುಗಳ ಹಣ ಜಮಾ ಆಗಿದ್ದು ಇನ್ನು ಹಲವು ಕಂತುಗಳು ( Installments ) ಬರಲು ಬಾಕಿ ಇವೆ. ಆದರೆ ಇನ್ನೂ ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ.
ಕಾರಣ ನೋಡುವುದಾದರೆ ಎಷ್ಟೋ ಮಹಿಳೆಯರ ಖಾತೆಗೆ ಕೆ ವೈ ಸಿ ( KYC ) ಆಗದೆ ಇರುವುದು, ಆಧಾರ್ ಲಿಂಕ್ ( Adhar Link ) ಆಗದೇ ಇರುವುದು, ಅರ್ಜಿ ಸಲ್ಲಿಸುವಾಗ ಸರಿಯಾದ ದಾಖಲೆಗನ್ನು ನೀಡದೆ ಇರುವುದು ಪ್ರಮುಖ ಕಾರಣವಾಗಿದೆ. ಇದರ ಜೊತೆಗೆ ಕೆಲವು ತಾಂತ್ರಿಕ ದೋಷಗಳು (technical issues) ಕೂಡ ಮಹಿಳೆಯರ ಬ್ಯಾಂಕ್ ಖಾತೆಗೆ (Bank Account) ಹಣ ಬಾರದಂತೆ ಮಾಡಿವೆ.
ಗೃಹಲಕ್ಷ್ಮಿ ಹಣವನ್ನು ಪಡೆದುಕೊಳ್ಳಲು ಈ ಕ್ರಮ ಕೈಗೊಳ್ಳಬೇಕು :
ಸಿಡಿಪಿಓ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿದ ದಾಖಲೆಗಳನ್ನು ನೀಡಬೇಕು
ಅದೆಷ್ಟೋ ಮಹಿಳೆಯರ ಖಾತೆಗೆ ಇನ್ನು ಒಂದು ಕಂತಿನ ಹಣವೂ ಬಂದಿಲ್ಲ. ಈ ರೀತಿಯ ಸಮಸ್ಯೆ ಇದ್ದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೋಗಿ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದ್ದಕ್ಕೆ ಸಿಕ್ಕಿರುವ ಸ್ವೀಕೃತಿ ಎಲ್ಲವನ್ನು ಕೊಟ್ಟು ನಿಮ್ಮ ಖಾತೆಗೆ ಯಾಕೆ ಹಣ ಬಂದಿಲ್ಲ ಎನ್ನುವ ಮಾಹಿತಿಯನ್ನು ಪಡೆಯಿರಿ.
ಯಾವ ತಾಂತ್ರಿಕ ಸಮಸ್ಯೆಯಿಂದ ನಿಮ್ಮ ಖಾತೆಗೆ ಹಣ ಬಂದಿಲ್ಲ ಎನ್ನುವುದನ್ನು ತಿಳಿಸುತ್ತಾರೆ. ಅದರ ಮೂಲಕ ಆ ಸಮಸ್ಯೆಯನ್ನು ಬಗೆಹರಿಸಿ ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುವ ಹಾಗೆ ಮಾಡಬಹುದು.
ಸಿ ಡಿ ಪಿ ಓ ಕಚೇರಿಯಲ್ಲಿ ನಿಮ್ಮ ಅರ್ಜಿ ಅನುಮೋದನೆ ಬಾಕಿ ಇದ್ದರೆ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಿ. ಇದಾದ ಬಳಿಕ ನಿಮ್ಮ ಖಾತೆಗೆ ಕೆವೈಸಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದರೆ ಪೆಂಡಿಂಗ್ ಇರುವ ಹಣ ಕೂಡ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಯಾಕಂದ್ರೆ ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿರುತ್ತದೆ.