ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡು ಮೂವರು ಕಾರ್ಮಿಕರು ಸಜೀವ ದಹನವಾದ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
600 ರೂ. ಕೂಲಿ ಕೆಲಸಕ್ಕೆ ಹೋಗಿ ಜೀವಕ್ಕೆ ಕುತ್ತು
ಹೊಸ ಫ್ಯಾಕ್ಟರಿಯಾಗಿದೆ ಸಂಬಳ ಜಾಸ್ತಿ ಸಿಗುತ್ತೆ, ಅಲ್ಲದೆ ಮನೆ ಪಕ್ಕದಲ್ಲೇ ಫ್ಯಾಕ್ಟರಿ ಇದೆ ಅಂತ ಅಂತ ಗಾಯಾಳುಗಳು ಇರ್ಫಾನ್, ಅಪ್ರೋಜ್ ಪಾಷಾ ಒಂದು ವಾರದ ಹಿಂದಷ್ಟೆ ಕೆಲಸಕ್ಕೆ ಸೇರಿದ್ದರು. ಇರ್ಫಾನ್ ಪಾಷಾ ಸುಗಂಧ ದ್ರವ್ಯ ಫ್ಯಾಕ್ಟರಿಯಲ್ಲಿ ಕ್ಯಾಂಟರ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಆದರೆ ಹೆಚ್ಚಿನ ಸಂಬಳ ನೀಡುತ್ತಾರೆ ಎಂಬ ಆಸೆಯಿಂದ ಡ್ರೈವರ್ ಕೆಲಸ ಬಿಟ್ಟು ಫ್ಯಾಕ್ಟರಿಗೆ ಸೇರಿದ್ದನು.
ಇನ್ನು ರವಿವಾರ (ಫೆ.18) ರಂದು ರಜೆ ಇದ್ದ ಕಾರಣ, ಇರ್ಫಾನ್ ಪಾಷಾಗೆ ಊಟ ಕೊಡಲು ಅಪ್ರೋಜ್ ಪಾಷಾ, ಅಪ್ರೋಜ್ ಪಾಷಾರ ಮಗ ಮತ್ತು ಅಪ್ರೋಜ್ ಪಾಷಾರ ಅಕ್ಕನ ಮಗ ಕಾರ್ಖಾನೆಗೆ ಹೋಗಿದ್ದರು. ಈ ವೇಳೆ ಕಾರ್ಖಾನೆಯಲ್ಲಿ ಧಿಡೀರನೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೆ ಐವರು ಹೊರಗೆ ಓಡಿ ಬಂದರೂ, ಬೆಂಕಿ ತಗುಲಿತ್ತು. ಗಾಯಾಳುಗಳು ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.