ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಗಾಗಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.
ರಾಜ್ಯ ಬಜೆಟ್ ಮಂಡನೆ ಬಳಿಕ ಎರಡು ದಿನ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಸಣ್ಣ ಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿತ್ತು ಹೀಗಾಗಿ ವಿಶ್ರಾಂತಿ ಪಡೆಯಲು ಸದ್ಯ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.
ರಾಜ್ಯ ಬಜೆಟ್ ಅನ್ನು 3 ಗಂಟೆ 15 ನಿಮಿಷ ಸುದೀರ್ಘ ಬಜೆಟ್ ಭಾಷಣ ಮತ್ತು 2 ದಿನ ನಿರಂತರ ಜಿಲ್ಲಾ ಪ್ರವಾಸಗಳಲ್ಲಿ ಭಾಷಣ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯನವರಿಗೆ ಗಂಟಲು ನೋವುನ ಸಮಸ್ಯೆ ಎದುರಾಗಿದೆ. ಹೀಗಾಗಿ ವಿಶ್ರಾಂತಿಯ ಅವಶ್ಯಕತೆ ಇದ್ದು ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.