ಮಾಜಿ ಸಚಿವ, ಮಹಾಲಕ್ಷ್ಮೀ ಲೇಔಟ್ನ ಬಿಜೆಪಿ ಶಾಸಕ ಗೋಪಾಲಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಹಾಗು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ನಗರದ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೇ ಭೇಟಿ ನೀಡಿದ ಶಾಸಕ ಗೋಪಾಲಯ್ಯ ಕೆಲಕಾಲ ಸಮಾಲೋಚನೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಇದೀಗ ಕಾಂಗ್ರೆಸ್ ನಾಯಕ ಡಿಕೆಶಿ ಯವರನ್ನು ಬಿಜೆಪಿ ಶಾಸಕರು ಭೇಟಿ ಮಾಡಿ ಚರ್ಚಿಸಿರುವುದು ಬಾರಿ ಕುತೂಹಲಕ್ಕೆ ಕಾರಣವಾಗಿದೆ.
ಇನ್ನೂ ಬಿಜೆಪಿಯ ಮತ್ತೊಬ್ಬ ಶಾಸಕ ಎಸ್.ಟಿ ಸೋಮಶೇಖರ್ ಕೂಡ ಕೆಪಿಸಿಸಿ ಅಧ್ಯಕ ಡಿಕೆಶಿವಕುಮಾರ್ ಅವರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಬಿಜೆಪಿಗೆ ಭಾರಿ ಆಘಾತ ನೀಡುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ ಎನ್ನುವ ಕೂಗು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.