ನಮ್ಮ ಮೆಟ್ರೋ ನೆರಳೆ ಹಾಗೂ ಹಸಿರು ಮಾರ್ಗದಲ್ಲಿ (Namma Metro Purple Line) ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಕೆಲಸಕ್ಕೆ ತೆರಳುವ ಪ್ರಯಾಣಿಕರು ಕೆಲಕಾಲ ಪರದಾಟ ಅನುಭವಿಸಿದ್ದಾರೆ
ಗರುಡಚಾರ್ ಪಾಳ್ಯ, ಬೈಯಪ್ಪನಹಳ್ಳಿ ಮಾರ್ಗ ಮಧ್ಯೆ ಸಮಸ್ಯೆ ಎದುರಾಗಿದೆ. ಸಿಗ್ನಲಿಂಗ್ ಸಮಸ್ಯೆಯಿಂದ ಮೆಟ್ರೋ ಓಡಾಟ ವಿಳಂಬವಾಗುತ್ತಿದ್ದು, ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ. ಮೆಟ್ರೋ ನಿಲ್ದಾಣದೊಳಗೆ ಪ್ರಯಾಣಿಕರು ಭದ್ರತಾ ವಿಭಾಗದ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದರು. ಇತ್ತ ಗ್ರೀನ್ ಲೈನ್ನಲ್ಲಿಯೂ ಈ ಸಮಸ್ಯೆ ಎದುರಾಗಿದೆ. ನ್ಯಾಷನಲ್ ಕಾಲೇಜು ನಿಲ್ದಾಣದಲ್ಲಿ ಮೆಟ್ರೋ ಸಿಗದೆ ಜನ ಪರದಾಡಿದ್ದಾರೆ.
ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿ To ಗರುಡಾಚಾರ್ಪಾಳ್ಯ ನಡುವೆ ನಿಧಾನಗತಿಯಲ್ಲಿ ಮೆಟ್ರೋ ರೈಲುಗಳು ಓಡಾಟ ನಡೆಸುತ್ತವೆ. ಪ್ರತಿ ಅರ್ಧಗಂಟೆಗೊಮ್ಮೆ ಮೆಟ್ರೋ ಓಡಾಟ ನಡೆಸುತ್ತಿದ್ದು, ಇದರಿಂದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ