ಮಹಿಳೆಯರನ್ನು ಬಾಧಿಸುವ ಹಲವಾರು ಆರೋಗ್ಯ ಸಮಸ್ಯೆಗಳಲ್ಲಿ ಸ್ತನದ ಕ್ಯಾನ್ಸರ್ ಕೂಡ ಒಂದು. ಗ್ಲೋಬೋಕಾನ್ ಎಂಬ ಸಂಸ್ಥೆ 2020ರಲ್ಲಿ ನಡೆಸಿದ ಅಧ್ಯಯನವೊಂದರ ಪ್ರಕಾರ ಭಾರತದಲ್ಲಿ ಪ್ರತಿ ನಾಲ್ಕು ನಿಮಿಷಗಳಿಗೊಮ್ಮೆ ಒಬ್ಬ ಮಹಿಳೆಯಲ್ಲಿ ಪರೀಕ್ಷೆ ಮಾಡಿದಾಗ ಸ್ತನದ ಕ್ಯಾನ್ಸರ್ ಇರುವುದು ಪತ್ತೆಯಾಗುತ್ತಿದೆ, ಪ್ರತಿ ವರ್ಷ 1,78,000 ಸ್ತನದ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿವೆ
ಸ್ತನದ ಕ್ಯಾನ್ಸರ್ ಆರಂಭಿಕ ಹಂತಗಳಲ್ಲಿ ಗಮನಾರ್ಹ ಲಕ್ಷಣಗಳನ್ನು ಪ್ರಕಟಿಸದೆ ಇರಬಹುದು. ಹೀಗಾಗಿ ಮ್ಯಾಮೊಗ್ರಾಮ್ ನಂತಹ ತಪಾಸಣೆಗಳನ್ನು ನಿಯಮಿತವಾಗಿ ಮಾಡಿಸಿಕೊಳ್ಳುವುದು ಶೀಘ್ರವಾಗಿ ಈ ರೋಗವನ್ನು ಪತ್ತೆಹಚ್ಚುವುದಕ್ಕೆ ನಿರ್ಣಾಯಕವಾಗಿವೆ
ದೇಶದಾದ್ಯಂತ ಸ್ತನ ಕ್ಯಾನ್ಸರ್ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚಾಗಿವೆ. ‘ಗ್ಲೋಬೋಕನ್ ಡೇಟಾ 2020’ ರ ಪ್ರಕಾರ, ಭಾರತದಲ್ಲಿ ಒಟ್ಟು ಕ್ಯಾನ್ಸರ್ ಪ್ರಕರಣಗಳ ಪೈಕಿ ಸ್ತನ ಕ್ಯಾನ್ಸರ್ ಪ್ರಮಾಣ ಶೇ 13.5 ಮತ್ತು ಸಾವು ಸಂಭಿಸುತ್ತಿರುವುದರ ಪೈಕಿ ಶೇ 10.6 ಆಗಿದೆ ಎಂದು ಅವರು ಹೇಳಿದ್ದಾರೆ.
ಸ್ತನ ಕ್ಯಾನ್ಸರ್ ಸ್ಕ್ರೀನಿಂಗ್ ಶಿಫಾರಸುಗಳು ವಯಸ್ಸು, ಅಪಾಯಕಾರಿ ಅಂಶಗಳು ಮತ್ತು ವಿವಿಧ ಆರೋಗ್ಯ ಸಂಸ್ಥೆಗಳ ಮಾರ್ಗಸೂಚಿಗಳಂತಹ ಅಂಶಗಳನ್ನು ಅವಲಂಬಿಸಿ ಬದಲಾಗಬಹುದು. 20 ಮತ್ತು 30 ರ ಮಹಿಳೆಯರಿಗೆ ಸ್ತನ ಪರೀಕ್ಷೆಗಳನ್ನು ಸಾಮಾನ್ಯವಾಗಿ ಪ್ರತಿ ಒಂದರಿಂದ ಮೂರು ವರ್ಷಗಳಿಗೊಮ್ಮೆ ಮತ್ತು 40 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರಿಗೆ ವಾರ್ಷಿಕವಾಗಿ ಶಿಫಾರಸು ಮಾಡಲಾಗುತ್ತದೆ.
ಅಸಮರ್ಪಕ ಆಹಾರ ಪದ್ಧತಿ, ಆಧುನಿಕ ಜೀವನಶೈಲಿ ಮತ್ತು ಕೆಲವು ಸಂದರ್ಭಗಳಲ್ಲಿ ಆನುವಂಶಿಕ ಕಾರಣಗಳಿಂದ ಸ್ತನ ಕ್ಯಾನ್ಸರ್ ಬರುತ್ತದೆ. ಇತ್ತೀಚಿನ ದಿನಗಳಲ್ಲಿ ಯುವತಿಯರಲ್ಲೂ ಈ ಸಮಸ್ಯೆ ಕಂಡು ಬರುತ್ತಿದೆ. 25 ರಿಂದ 30 ವರ್ಷದವರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಕಾಣಿಸುತ್ತಿವೆ. ಮದ್ಯಪಾನ, ವಿಳಂಬ ಮದುವೆ ಕೂಡ ಈ ಕ್ಯಾನ್ಸರ್ ಬೆಳವಣಿಗೆಗೆ ಪ್ರಮುಖ ಕಾರಣಗಳಾಗಿವೆ ಎನ್ನಲಾಗಿದೆ.