ಬೆಂಗಳೂರು: ನಟ ದರ್ಶನ್ ವಿರುದ್ಧ ಮಹಿಳಾ ಸಂಘ ಸಂಸ್ಥೆಗಳ ಸದಸ್ಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದೂರು ದಾಖಲಿಸಿದ್ದಾರೆ. ನಿರ್ಮಾಪಕ ಉಮಾಪತಿ ಹಾಗೂ ದರ್ಶನ್ ನಡುವಿನ ವಾಕ್ಸಮರ ಬೆನ್ನಲ್ಲೆ ದರ್ಶನ್ ವಿರುದ್ದ ಹಲವು ಸಂಘ ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸಿವೆ.
ನಟ ದರ್ಶನ್ ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಅಂತ ಮಹಿಳೆಯರು ಆಗ್ರಹಿಸಿದ್ದಾರೆ.
ಸ್ವಯಂ ಪ್ರೇರಿತರಾಗಿ ನಾವು ಬಂದಿದ್ದು, ಯಾವುದೇ ರಾಜಕೀಯ ಪ್ರೇರಿತ ಅಲ್ಲ ಎಂದ ಮಹಿಳೆಯರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ರು. ವೇದಿಕೆ ಮೇಲೆ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರವಾಗಿ
ಮಹಿಳೆಯರು ದೂರು ನೀಡಿದ್ದಾರೆ.