ಆನೇಕಲ್:- ನಡು ರಸ್ತೆಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬೀಕರ ಕೊಲೆ ನಡೆದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಬಳಿ ಜರುಗಿದೆ. ಹಳೆ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಿಜಯ್ ಕುಮಾರ್(27) ಕೊಲೆಯಾದ ಯುವಕ. ಮನೋಜ್@ಬಬ್ಲು ಕೊಲೆಯಲ್ಲಿ ಜೈಲಿಗೆ ಹೋಗಿ ಬಂದಿದ್ದ. 2017ರಲ್ಲಿ ಕೊಲೆ ಪ್ರಕರಣದಲ್ಲಿ ವಿಜಯ್ ಕುಮಾರ್ ಭಾಗಿಯಾಗಿದ್ದ. ಏಳು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆ ಆಗಿದ್ದ. ಇಂದು ಬೆಳಗ್ಗೆ 4 ಗಂಟೆಗೆ ಮನೆಯಿಂದ ಕರೆದು ಕೊಲೆ ಮಾಡಲಾಗಿದೆ.
ಮನೆಯ ಎದುರಿನ ರಸ್ತೆಯಲ್ಲಿ ಭೀಕರವಾಗಿ ಕೊಲೆ ನಡೆದಿದೆ. ಈ ಹಿಂದೆ ಕೊಲೆ ಆಗಿದ್ದ ಮನೋಜ್ ಕಡೆಯವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮನೋಜ್ ಕುಮಾರ್ ಸಹೋದರ ಅರ್ಜುನ್ ಕೊಲೆ ಮಾಡಿದ್ದಾನೆಂದು ವಿಜಯ್ ಪೋಷಕರ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.