ರಾಂಚಿ: ರೋಹಿತ್ ಶರ್ಮಾ, ಶುಭಮನ್ ಗಿಲ್ ಜವಾಬ್ದಾರಿಯುತ ಅರ್ಧಶತಕ, ಧ್ರುವ್ ಜುರೆಲ್ ತಾಳ್ಮೆಯ ಬ್ಯಾಟಿಂಗ್ ನೆರವಿನಿಂದ ಭಾರತ, ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ಗಳ ಜಯ ಸಾಧಿಸಿದೆ. ಈ ಮೂಲಕ ಹ್ಯಾಟ್ರಿಕ್ ಗೆಲುವಿನೊಂದಿಗೆ ಸರಣಿಯನ್ನು ಕೈವಶ ಮಾಡಿಕೊಂಡಿದೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-1 ಅಂತರದಲ್ಲಿ ಭಾರತ ಮುನ್ನಡೆ ಸಾಧಿಸಿದೆ.
ನೇ ದಿನದಾಟದಲ್ಲಿ ಸ್ಫೋಟಕ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಭಾರತ 120 ರನ್ಗಳಿಗೆ 5 ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ಮೊದಲ ವಿಕೆಟ್ಗೆ 84 ರನ್ಗಳ ಜೊತೆಯಾಟ ನೀಡಿದ್ದರು. ಆದ್ರೆ 37 ರನ್ ಗಳಿಸಿ ಯಶಸ್ವಿ ಜೈಸ್ವಾಲ್ ಔಟಾಗುತ್ತಿದ್ದಂತೆ, ಅರ್ಧಶತಕ ಗಳಿಸಿದ್ದ ರೋಹಿತ್, ರಜತ್ ಪಾಟೀದಾರ್, ರವೀಂದ್ರ ಜಡೇಜಾ ಹಾಗೂ ಸರ್ಫರಾಜ್ ಖಾನ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿ ಹೊರ ನಡೆದರು. ಜಡೇಜಾ 33 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿದ್ರೆ, ಪಾಟೀದಾರ್ ಹಾಗೂ ಸರ್ಫರಾಜ್ ಖಾನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ಗೆ ಮರಳಿದರು. ಈ ವೇಳೆ ಶುಭಮನ್ಗಿಲ್ ಜೊತೆಗೂಡಿದ ಧ್ರುವ್ ಜುರೆಲ್ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಇದರಿಂದ ಗೆಲುವು ಭಾರತದತ್ತ ವಾಲಿತು.
ಅಂತಿಮವಾಗಿ ಶುಭಮನ್ ಗಿಲ್ 124 ಎಸೆತಗಳಲ್ಲಿ ಎರಡು ಭರ್ಜರಿ ಸಿಕ್ಸರ್ಗಳೊಂದಿಗೆ 52 ರನ್ ಗಳಿಸಿದ್ರೆ, ಧ್ರುವ್ ಜುರೆಲ್ 77 ಎಸೆತಗಳಲ್ಲಿ 39 ರನ್ ಗಳಿಸಿ ಅಜೇಯರಾಗುಳಿದರು.