ಬೆಂಗಳೂರು: ವಿಧಾನಸೌದ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಹೌದು ಅಧಿವೇಶನ ಮತ್ತು ರಾಜ್ಯ ಸಭೆ ಚುನಾವಣೆ ಹಿನ್ನೆಲೆ ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ರಿಂದ ಆದೇಶ ನೀಡಲಾಗಿದೆ.
ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮಂಗಳವಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ.