ಬೆಂಗಳೂರು: ರೈತರ ಜಮೀನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅನೇಕ ನಿಯಮವನ್ನು ಜಾರಿಗೊಳಿಸುತ್ತಿದೆ. ಇನ್ನು ರಾಜ್ಯದಲ್ಲಿ ರೈತರಿಗಾಗಿ ವಿಶೇಷ ಸೌಲಭ್ಯವನ್ನು ಕೂಡ ರಾಜ್ಯ ಸರ್ಕಾರ ನೀಡುತ್ತಿದೆ. ಸದ್ಯ ರೈತರ ಬರ ಪರಿಹಾರಕ್ಕಾಗಿ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಒಟ್ಟಾರೆ 70 % ರಷ್ಟು ಸಣ್ಣ ರೈತರಿದ್ದಾರೆ ಆದರೆ ಕೇಂದ್ರ ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಸಣ್ಣ ರೈತರ ಸಂಖ್ಯೆ ಶೇ. 44 ರಷ್ಟು ಮಾತ್ರ. ಇದರಿಂದಾಗಿ ಕೇಂದ್ರದಿಂದ ಲಭ್ಯವಾಗುವ ಬರ ಪರಿಹಾರದಿಂದ ಸಾಕಷ್ಟು ರೈತರು ವಂಚಿತರಾಗುತ್ತಿದ್ದಾರೆ.
ಈ ಸಮಸ್ಯೆಯನ್ನು ಪರಿಹರಿಸಿಕೊಳಲು ರಾಜ್ಯದ ರೈತರು ತಮ್ಮ RTC ಜೊತೆ Aadhaar Link ಮಾಡುವುದು ಕಡ್ಡಾಯವಾಗಿದೆ. RTC ಜೊತೆ ಆಧಾರ್ ಲಿಂಕ್ ಮಾಡಿದರೆ ರಾಜ್ಯದ ಸಣ್ಣ ರೈತರ ಅಂಕಿ ಅಂಶಗಳ ಬಗ್ಗೆ ಮಾಹಿತಿ ಲಭಿಸುತ್ತದೆ. ಹೀಗಾಗಿ ಎಲ್ಲ ರೈತರು ತಮ್ಮ RTC ಜೊತೆ Aadhaar Link ಮಾಡಿಕೊಳ್ಳುವ ಮೂಲಕ ಸರ್ಕಾರ ಸೌಲಭ್ಯವನ್ನು ಪಡೆದುಕೊಳಬಹುದಾಗಿದೆ.
RTC ಜೊತೆ ಆಧಾರ್ ಲಿಂಕ್ ಮಾಡಲು ಪ್ರತ್ಯೇಕ App ಬಿಡುಗಡೆ
ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ ಶೇ. 33 ರಷ್ಟು ಒಟ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಆತನ ಅಧಿಕಾರದ ವ್ಯಾಪ್ತಿಯಲ್ಲಿ ಯಾವ ರೈತನಿಗೆ ಎಲ್ಲಿ ಎಷ್ಟು ಎಕರೆ ಜಮೀನಿದೆ…? ಎನ್ನುವ ಕನಿಷ್ಠ ಮಾಹಿತಿ ಇದ್ದೆ ಇರುತ್ತದೆ.
ಅದನ್ನು ಮತ್ತೆ ರೈತರ ಬಳಿ ಕೇಳಿ ತಂತ್ರಾಂಶದಲ್ಲಿ ನಮೂದಿಸಬೇಕು. ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ನಮೂದಿಸದಿದ್ದರೆ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ RTC ಜೊತೆ Aadhaar Link ಮಾಡುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಮಾಡಲು ಶೀಘ್ರದಲ್ಲೇ ಹೊಸ App ಬಿಡುಗಡೆ ಮಾಡಲಾಗುವುದು ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿಕೆ ನೀಡಿದ್ದಾರೆ.