ಫ್ರೀಕಿ ದೇಶದ ಮಾಲಿಯ ಕೆನಿಬಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತವಾದ ಬಸ್ ಬಸ್ ಬುರ್ಕಿನಾ ಫಾಸೊಗೆ ಹೋಗುತ್ತಿತ್ತು. ಈ ವೇಳೆ ಬಸ್ ಸೇತುವೆಯಿಂದ ಕೆಳಗೆ ಬಿದ್ದು ಭೀಕರ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಪಶ್ಚಿಮ ಆಫ್ರಿಕಾದಲ್ಲಿ ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿದೆ. ಮಾಲಿಯ ಕಳಪೆ ರಸ್ತೆಗಳು ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಕಾರಣವೆಂದು ಉಲ್ಲೇಖಿಸಲಾಗಿದೆ. ಪ್ರಪಂಚದಾದ್ಯಂತದ ಎಲ್ಲಾ ರಸ್ತೆ ಸಾವುಗಳಲ್ಲಿ ಕಾಲು ಭಾಗದಷ್ಟು ಆಫ್ರಿಕಾದಲ್ಲಿ ಸಂಭವಿಸುತ್ತವೆ.