ಕೋಲಾರ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ನೆನ್ನೆ ಗೆಲುವು ಸಾಧಿಸಿದ್ದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳಲು ಮುಂದಾದ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಮತ್ತು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಪ್ಪಲಿ ಕಾಲಿನಿಂದ ನಾಸೀರ್ ಹುಸೇನ್ ಪೋಟೊ ತುಳಿದು ಹಾಕಿದ್ದಾರೆ.
ರಾಜ್ಯಸಭಾ ಸದಸ್ಯ ನಸೀರ್ ಹುಸೇನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಒತ್ತಾಯ ಮಾಡಲಾಗಿದೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ನೂರಾರು ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ.