ಬೆಂಗಳೂರು:- ಪಾಕ್ ಪರ ಘೋಷಣೆ ಹಿನ್ನೆಲೆ ಎನ್ಐಎ ತನಿಖೆ ನಡೆಸುವಂತೆ ಅಮಿತ್ ಶಾಗೆ ಕೇಂದ್ರ ಗೃಹ ಸಚಿವ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.
ಚುನಾವಣೆಯಲ್ಲಿ ಗೆದ್ದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ನೂತನ ಸಂಸದ ನಾಸೀರ್ ಹುಸೇನ್ ಮಾತನಾಡುತ್ತಿದ್ದರು. ಈ ವೇಳೆ ನಾಸಿರ್ ಹುಸೇನ್ ಹುಸೇನ್ ಪಕ್ಕದಲ್ಲಿ ನಿಂತಿದ್ದ ಯುವಕನೊಬ್ಬ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಆರೋಪ ಕೇಳಿಬಂದಿತ್ತು. ಈ ಕುರಿತು ಹಲವು ಬಿಜೆಪಿ ನಾಯಕರು ಕಿಡಿಕಾರಿದ್ದರು. ಜೊತೆಗೆ ನಾಳೆ(ಫೆ.28) ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆಗೆ ವಿಪಕ್ಷ ಬಿಜೆಪಿ ಕರೆ ಕೊಟ್ಟಿದ್ದಾರೆ. ಈ ನಡುವೆ ಈ ಘಟನೆಯ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಶೋಭಾ ಕರಂದ್ಲಾಜೆ ಪತ್ರ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.