ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ ಚಲನಚಿತ್ರ ಅಕಾಡೆಮಿಯು ಸೇರಿದೆ.
ಹಲವು ದಿನಗಳಿಂದ ಅಧ್ಯಕ್ಷ ಸ್ಥಾನಕ್ಕೆ ಹಲವಾರು ಹೆಸರುಗಳು ಕೇಳಿ ಬಂದಿದ್ದವು, ಅದರಲ್ಲಿ ಸಾಧು ಕೋಕಿಲಾ ಹೆಸರೂ ಸಹ ಸೇರಿಕೊಂಡಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಮತ್ತು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಸಾಧು ಕೋಕಿಲಾ ಅವರನ್ನೇ ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎನ್ನುವ ಮಾತೂ ಕೇಳಿ ಬಂದಿತ್ತು. ಅದೀಗ ನಿಜವಾಗಿದ್ದು ಸಾಧು ಕೋಕಿಲಾ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.