ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Rameshwaram Cafe Blast) ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಬಗ್ಗೆ ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ದಿವ್ಯಾ ಅವರು, ಸಿಸಿಟಿವಿ (CCTV) ದೃಶ್ಯಗಳನ್ನು ಗಮನಿಸಿದ್ದೇನೆ. 10 ಸೆಕೆಂಡುಗಳಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ. ಕೈತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಅಲ್ಲಿ ಯಾವುದೇ ಸಿಲಿಂಡರ್ ಇಟ್ಟಿರಲಿಲ್ಲ. ಅಲ್ಲದೇ ಕೆಫೆಯಲ್ಲಿಟ್ಟಿದ್ದ ಸಿಲಿಂಡರ್ಗಳು (LPG Cylinder) ಸೇಫ್ ಆಗಿದೆ. ಸ್ಫೋಟ ಸಂಭವಿಸಿದ ಜಾಗದಲ್ಲಿ ಉದ್ಯೋಗಿಯೊಬ್ಬರ ಐಡಿ ಕಾರ್ಡ್ ಪತ್ತೆಯಾಗಿದೆ. ಬ್ಯಾಟರಿ ಬೋಲ್ಟ್ಗಳು ಸಿಕ್ಕಿರೋದನ್ನ ಗಮನಿಸಿದ್ದೇನೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ನಮಗೆ ಸಿಕ್ಕ ಮಾಹಿತಿ ಪ್ರಕಾರ, ಯಾರೋ ಗ್ರಾಹಕರ ರೀತಿ ಬಂದು ಬ್ಯಾಗ್ ಇಟ್ಟು ಹೋಗಿದ್ದಾರೆ. ಆ ಬ್ಯಾಗ್ನಿಂದ ಬ್ಲಾಸ್ಟ್ ಆಗಿದೆ. ಆತ ಬಂದು ಹೋಗಿರುವ ನಿಖರವಾದ ಸಮಯದ ಬಗ್ಗೆ ಮಾಹಿತಿ ಇಲ್ಲ. ಸಿಸಿಟಿವಿ ದೃಶ್ಯಗಳನ್ನು ಪೊಲೀಸರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.