‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಾವು ಮದುವೆಯಾಗಿರುವುದರ ಬಗ್ಗೆ ದೀಪಿಕಾ ದಾಸ್ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಕನ್ಪಾರ್ಮ್ ಮಾಡಿದ್ದಾರೆ.
ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದು, ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ. ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.
ನಾಗಿಣಿ ಧಾರವಾಹಿಯ ಮೂಲಕ ಖ್ಯಾತಿ ಘಳಿಸಿದ್ದ ದೀಪಿಕಾ ದಾಸ್ ಬಿಗ್ ಬಾಸ್ ಕನ್ನಡದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಬಿಗ್ ಬಾಸ್ ಮನೆಯಲ್ಲಿ ಟಫ್ ಕಾಂಪಿಟೇಟರ್ ಆಗಿದ್ದ ದೀಪಿಕಾ ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.
ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.