ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಮುಂದುವರೆದಿದ್ದು ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಮೂರು ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬ್ರೂಕ್ ಫಿಲ್ಡ್ ಆಸ್ಪತ್ರೆಯಲ್ಲಿ ಫಾರುಕ್, ದಿಪಾಂಶು, ಸ್ವರ್ಣಾಂಭಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಿಗೆ ಜನರಲ್ ವಾರ್ಡ್ ನಲ್ಲಿ, ಸ್ವರ್ಣಾಂಭಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂವರ ಆರೋಗ್ಯದಲ್ಲೂ ಚೇತರಿಕೆ ಕಂಡಿದ್ದು, ಇಂದು ಐಸಿಯುನಿಂದ ಸ್ವರ್ಣಾಂಭಳನ್ನ ಜನರಲ್ ವಾರ್ಡ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿಗೆ ಸ್ವರ್ಣಾಂಭಳನ್ನ ಕರೆದುಕೊಂಡು ಹೋಗೋದಾಗಿ ಪೋಷಕರು ಮನವಿ ಮಾಡಿದ್ದಾರೆ. ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಿದ ನಂತರ ಮೈಸೂರಿಗೆ ಕಳಿಸೋ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.