ಬೆಂಗಳೂರು:- ಕೆಫೆಯಲ್ಲಿ ಬಾಂಬ್ ಇಟ್ಟ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಿಸಿಬಿ ಪೊಲೀಸರು ಬಾಂಬ್ ಇಟ್ಟ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕೋದಕ್ಕೆ ಶುರು ಮಾಡಿದ್ದಾರೆ. ಆರೋಪಿ ಯಾರು ಏನು ಎಂಬುದು ಬಹುತೇಕ ಗೊತ್ತಾಗಿದೆ. ಆರೋಪಿ ಬಸ್ನಲ್ಲಿ ಬಂದು, ಹೋಟೆಲ್ನಲ್ಲಿ ರವೆ ಇಡ್ಲಿ ತಿಂದು ಆಮೇಲೆ ಬಾಂಬ್ ಇಟ್ಟು ಹೋಗಿದ್ದಾನೆ. ಬರುವಾಗ ಮಾಸ್ಕ್ ಧರಿಸಿ ಬಂದಿದ್ದಾನೆ ಎಂದು ತಿಳಿಸಿದ್ದಾರೆ. ಅಲ್ಲದೇ ಆರೋಪಿಗೆ ಸುಮಾರು 35 ವರ್ಷ ವಯಸ್ಸಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.
ಹೋಟೆಲ್ನಲ್ಲಿ ಬ್ಯಾಗ್ ಇಟ್ಟು ಹೋದ 1 ಗಂಟೆ ಬಳಿಕ ಬಾಂಬ್ ಬ್ಲಾಸ್ಟ್ ಆಗಿದೆ. ಘಟನಾ ಸ್ಥಳದಲ್ಲಿ ಟೈಮರ್ ಸಹ ಪತ್ತೆಯಾಗಿದೆ. ವ್ಯಕ್ತಿಯ ಎಲ್ಲಾ ಚಟುವಟಿಕೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶೀಘ್ರದಲ್ಲೇ ಸಿಕ್ಕಿಬಿಳುತ್ತಾನೆ ಎಂದು ಎಂದು ಹೇಳಿದ್ದಾರೆ
ಘಟನೆ ಕುರಿತು ಮಾಹಿತಿ ಪಡೆದಿದ್ದೇನೆ. ಸಮಗ್ರ ತನಿಖೆ ನಡೆಸಲು 8 ಪೊಲೀಸ್ ಅಧಿಕಾರಿಗಳ ವಿಶೇಷ ತಂಡ ರಚಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ತಂಡ, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ. ಶೀಘ್ರದಲ್ಲೇ ಪೊಲೀಸರು ಆರೋಪಿಗೆ ಹೆಡೆಮುರಿ ಕಟ್ಟುತ್ತಾರೆ ಎಂದು ಹೇಳಿದ್ದಾರೆ.