ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಒಂದು ಕೇಳಿ ಬಂದಿದೆ. ಪ್ರೀತಿಸಿ ಮದುವೆಯಾಗಿದ್ದ ನಯನತಾರಾ ಹಾಗೂ ವಿಘ್ನೇಶ್ ಮಧ್ಯೆ ಮನಸ್ಥಾಪ ಶುರುವಾಗಿದ್ದು ಈ ಕಾರಣಕ್ಕೆ ಡಿವೋರ್ಸ್ ಪಡೆದುಕೊಳ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ತಮಿಳಿನ ಬೆಸ್ಟ್ ಕಪಲ್ ಅಂತಾನೇ ಫೇಮಸ್ ಆಗಿರುವ ನಯನತಾರಾ ಮತ್ತು ವಿಘ್ನೇಶ್ ಶಿವನ್ ಬಾಳಲ್ಲಿ ಬಿರುಗಾಳಿ ಬೀಸಿದ್ಯಾ ಎಂಬ ಅನುಮಾನ ಶುರುವಾಗಿದೆ. ಇದಕ್ಕೆಲ್ಲ ಕಾರಣ ನಯನತಾರಾ ಪತಿ ವಿಘ್ನೇಶ್ರನ್ನು ಅನ್ಫಾಲೋ ಮಾಡಿರೋದು.
ಪತ್ನಿಯನ್ನು ವಿಘ್ನೇಶ್ ಫಾಲೋ ಮಾಡ್ತಿದ್ದಾರೆ. ಆದರೆ ನಯನತಾರಾ ಅನ್ಫಾಲೋ ಮಾಡಿ ಫುಲ್ ಸೈಲೆಂಟ್ ಆಗಿದ್ದಾರೆ. ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನಟಿ ಅಳಲು ತೋಡಿಕೊಂಡಿದ್ದಾರೆ. ‘ಕಣ್ಣಲ್ಲಿ ನೀರು ಬರುತ್ತಿದ್ದರೂ ಇದು ನನಗೆ ಸಿಕ್ಕಿತು’ ಎಂದು ಬರೆದುಕೊಂಡಿದ್ದಾರೆ. ಇಬ್ಬರ ನಡುವೆ ಇದೀಗ ಬಿರುಕು ಮೂಡಿದೆ ಎನ್ನಲಾಗುತ್ತಿದೆ. ಡಿವೋರ್ಸ್ಗೆ ಈ ಜೋಡಿ ಮುಂದಾಗಿದೆ ಎಂದೇ ಹೇಳಲಾಗುತ್ತಿದೆ. ಆದರೆ ಈ ಸುದ್ದಿ ಅದೆಷ್ಟು ನಿಜ ಅನ್ನೋದನ್ನ ಕಾಲವೇ ಉತ್ತರಿಸಬೇಕಿದೆ.