ಬೆಂಗಳೂರು:- ನಗರದ ನಾಗರಭಾವಿ ಫ್ಲೈಓವರ್ ಮೇಲೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಕಾರು ಅಪಘಾತ ಸಂಭವಿಸಿದೆ.
ವೇಗವಾಗಿ ಬಂದಂತಹ ಕಾರು ಚಾಲಕನಿಂದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಚಾಲಕ ಸ್ಯಾಂಟ್ರೊ ಕಾರು ಚಲಾಯಿಸುತ್ತಿದ್ದ. ವೇಗವಾಗಿ ಬಂದಿದ್ದರಿಂದ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತ ಪರಿಣಾಮ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜ್ಞಾನಭಾರತಿ ಟ್ರಾಫಿಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ಜರುಗಿದೆ.