ಬೆಂಗಳೂರು: ಕುಡಿಯುವ ನೀರಿನ ಪೂರೈಕೆಗೆ ಬೆಂಗಳೂರಿನ ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ಹೇಳಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿ ನೀರಿನ ಸಮಸ್ಯೆಗೆ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದ್ದಾರೆ.
ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ. ಈ ಸಂಬಂಧ ಬಿಡಬ್ಲ್ಯೂಎಸ್ಎಸ್ಬಿ ಹಾಗೂ ಪಾಲಿಕೆ ಅಧಿಕಾರಿಗಳು ಪ್ರತಿನಿತ್ಯ ಸಭೆ ನಡೆಸುತ್ತಿದ್ದಾರೆ. ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾರ್ಚ್ 7ರ ಒಳಗಾಗಿ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.