ಶಹಬಾಜ್ ಷರೀಫ್ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಮತದಾನಕ್ಕೆ ಮುಂಚೆಯೇ, ಅಂಕಿಅಂಶಗಳು ಪಿಎಂಎಲ್-ಎನ್ ಪರವಾಗಿದ್ದು ದೇಶದ ಆಜ್ಞೆಯು ಮತ್ತೊಮ್ಮೆ ಶೆಹಬಾಜ್ ಷರೀಫ್ ಅವರ ಪರವಾಗಿ ಬರುತ್ತದೆ ಎಂದು ಹೇಳಲಾಗಿತ್ತು. ಅದರಂತೆ ಇದೀಗ ಷರೀಫ್ ಮತ್ತೊಮ್ಮೆ ಪಾಕ್ ಪ್ರಧಾನಿಯಾಗಿ ಹುದ್ದೆಗೇರಿದ್ದಾರೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ನಾಯಕ ಒಮರ್ ಅಯೂಬ್ ಖಾನ್ ಸಹ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು ಅವರಿಗೆ ಸೋಲಾಗಿದೆ.
ಪಾಕಿಸ್ತಾನದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿಲ್ಲ. ಇದರ ನಂತರ, ನವಾಜ್ ಷರೀಫ್ ಅವರ ಪಕ್ಷವಾದ ಪಿಎಂಎಲ್-ಎನ್ ಪಿಪಿಪಿ ಮತ್ತು ಎಂಕ್ಯೂಎಂ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ನಿರ್ಧರಿಸಿತ್ತು. ಶೆಹಬಾಜ್ ಷರೀಫ್ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರ. ಪಕ್ಷದ ಪರವಾಗಿ ಪ್ರಧಾನಿ ಅಭ್ಯರ್ಥಿಗೆ ನಾಮಪತ್ರ ಸಲ್ಲಿಸಿದ್ದರು. ಶಹಬಾಜ್ ಷರೀಫ್ ಈ ಹಿಂದೆ ಏಪ್ರಿಲ್ 2022 ರಿಂದ ಆಗಸ್ಟ್ 2023 ರವರೆಗೆ ಪಾಕಿಸ್ತಾನದ ಪ್ರಧಾನಿಯಾಗಿದ್ದರು. ಆ ಸಮಯದಲ್ಲಿ ಅವರು ಪಿಪಿಪಿಯೊಂದಿಗೆ ಸರ್ಕಾರ ರಚಿಸಿದ್ದರು.
ಫೆಬ್ರವರಿ 8ರಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಇದರಲ್ಲಿ ಪಿಎಂಎಲ್-ಎನ್ 75 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರ ಪಕ್ಷವು ಬೆಂಬಲಿಸಿದ ಸ್ವತಂತ್ರ ಅಭ್ಯರ್ಥಿಗಳು 90ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದ್ದರು. ಪಿಪಿಪಿ 54 ಸ್ಥಾನಗಳನ್ನು ಗೆದ್ದಿತ್ತು. ಇದೀಗ ಶೆಹಬಾಜ್ ಷರೀಫ್ ಮತ್ತೊಮ್ಮೆ ಪ್ರಧಾನಿ ಗದ್ದುಗೆಗೇರೋ ಮುಲಕ ಹೊಸ ಸರ್ಕಾರ ರಚನೆಗೆ ಮುಂದಾಗಿದ್ದಾರೆ.