ಬೆಂಗಳೂರು:- ಮಕ್ಕಳ ಆರೈಕೆ ಫುಲ್ ಟೈಮ್ ಕೆಲಸ ಮಾಡುವ ಪತ್ನಿಗೆ ಗಂಡ ಹಣ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಕೆನರಾ ಬ್ಯಾಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಪತಿಗೆ ಮಾಸಿಕ 36,000 ರೂ. ಪಾವತಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಸೂಚಿಸಿದ್ದಾರೆ.
2023ರ ಜೂನ್ನಲ್ಲಿ ಆನೇಕಲ್ನ ಸೆಷನ್ಸ್ ನ್ಯಾಯಾಲಯವು ಪತ್ನಿಗೆ 18,000 ರೂ. ಪಾತವಿಸುವಂತೆ ಹೇಳಿತ್ತು. ಬಳಿಕ 41 ವರ್ಷದ ಮಹಿಳೆ ತನಗೆ ಮತ್ತು ತನ್ನಿಬ್ಬರು ಇಬ್ಬರು ಮಕ್ಕಳಿಗೆ ತಿಂಗಳಿಗೆ 36,000 ರೂ. ನೀಡುವಂತೆ ಕೇಳಿದ್ದರು. ಜೀವನ ವೆಚ್ಚಕ್ಕೆ ಅನುಗುಣವಾಗಿ ಅಥವಾ ಪತಿಯೊಂದಿಗೆ ಜೀವನ ಮುಂದುವರಿಸಿದರೆ ಜೀವನಾಂಶವನ್ನು ಪತ್ನಿ ಮತ್ತು ಮಕ್ಕಳಿಗೆ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.
ಪತ್ನಿ ಕೆಲಸ ಮಾಡಲು ಅರ್ಹಳಾಗಿದ್ದಾಳೆ ಎಂಬ ಪತಿಯ ವಾದದ ಆಧಾರದ ಮೇಲೆ ತಿಂಗಳಿಗೆ ಕೇವಲ 18,000 ರೂ.ಗಳನ್ನು ಜೀವನಾಂಶವಾಗಿ ನೀಡಿ ಎಂದು ಆದೇಶ ನೀಡಿದ್ದ ಸೆಷನ್ಸ್ ನ್ಯಾಯಾಲಯದ ಹಿಂದಿನ ತೀರ್ಪಿನಲ್ಲಿ ದೋಷವಿದೆ ಎಂದು ನ್ಯಾಯಾಲಯ ಹೇಳಿದೆ. ಹೆಂಡತಿಯು ಸೋಮಾರಿಯಾಗಿದ್ದಾಳೆ. ಹೀಗಾಗಿ ಆಕೆ ಕೆಲಸಕ್ಕೆ ಹೋಗುತ್ತಿಲ್ಲ ಎಂಬ ಪತಿಯ ವಾದವನ್ನು ಉಲ್ಲೇಖಿಸಿದ ನ್ಯಾಯಾಲಯ, ಇದು ಅಸಂಬದ್ಧವಾಗಿದೆ. ಹೆಂಡತಿ ಅರ್ಹತೆ ಹೊಂದಿರುವುದರಿಂದ, ಯಾವುದೇ ಜೀವನಾಂಶವನ್ನು ಪಡೆಯಲು ಹೆಂಡತಿ ಅನರ್ಹ ಎಂದು ಹೇಳಲಾಗುವುದಿಲ್ಲ. ಪ್ರತಿ ಪ್ರಕರಣವನ್ನು ಅರ್ಹತೆಯ ಮೇಲೆ ಪರಿಗಣಿಸಬೇಕು. ಹೆಂಡತಿ, ಗೃಹಿಣಿ ಮತ್ತು ತಾಯಿಯಾಗಿ, ವಿಶ್ರಾಂತಿ ಇಲ್ಲದೆ ಗಡಿಯಾರದಂತೆ ಕೆಲಸ ಮಾಡುತ್ತಾಳೆ. ಅದರಲ್ಲೂ ಮಕ್ಕಳನ್ನು ನೋಡಿಕೊಳ್ಳುವುದು ಪೂರ್ಣ ಸಮಯದ ಕೆಲಸ ಎಂದು ನ್ಯಾಯಾಲಯ ಹೇಳಿದೆ.