ಬೆಂಗಳೂರು:- ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್ ಮಾಡಿ ಎಂದು ಮಾಜಿ ಸಚಿವ ಅಶೋಕ್ ಆಗ್ರಹಿಸಿದ್ದಾರೆ.
ಈ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಶಾಮೀಲು ಮಾಡಬೇಕು. ಜೊತೆಗೆ 100 ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನೂ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ.
FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ?
ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು.
ಈ ಇಡೀ ಪ್ರಕರಣ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.