ಬೆಂಗಳೂರು:- ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟ ನೀಡುವ ಸುಳಿವನ್ನು ಶಿಕ್ಷಣ ಸಚಿವರು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನ ಬಿಸಿಯೂಟ ಮುಂದುವರೆಸಲು ಅನುಮೋದನೆ ಪಡೆದ ಬಳಿಕ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನಡೆದಿದೆ. ಈ ಬಗ್ಗೆ ಚರ್ಚಿಸಲಾಗುತ್ತೆ ಎಂದರು.
ಈ ಹಿಂದೆ 8ನೇ ತರಗತಿವರೆಗೆ ಶಾಲಾ ಮಕ್ಕಳಿಗೆ ವಾರದಲ್ಲಿ ಒಮ್ಮೆ ಮೊಟ್ಟೆ ನೀಡಲಾಗುತ್ತಿತ್ತು, ನಮ್ಮ ಸರ್ಕಾರ ಬಂದ ನಂತರ ವಾರದಲ್ಲಿ 2 ಬಾರಿ ಮೊಟ್ಟೆ ನೀಡಲಾಗುತ್ತಿದ್ದು, ಇದನ್ನು 10ನೇ ತರಗತಿವರೆಗೆ ವಿಸ್ತರಿಸಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವತ್ತ ಗಮನ ಹರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.