ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಬಾಲ್ ಅವರು ಭೇಟಿಯಾಗಿದ್ದಾರೆ. ಭೇಟಿಯ ವೇಳೆ ಗಾಜಾದ ಬೆಳವಣಿಗೆಗಳು ಮತ್ತು ತುರ್ತು ಮಾನವೀಯ ನೆರವು ಒದಗಿಸುವ ಕುರಿತಂತೆ ಚರ್ಚೆ ನಡೆಸಿದ್ದಾರೆ.
‘ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಬಾಲ್ ಅವರು, ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು,ಗಾಜಾದ ಬೆಳವಣಿಗೆ ಕುರಿತಂತೆ ಮಾಹಿತಿ ನೀಡಲಾಯಿತು’ಎಂದು ಪ್ರಧಾನಿಗಳ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.
‘ಒತ್ತೆಯಾಳುಗಳ ಬಿಡುಗಡೆ ಮತ್ತು ಮಾನವೀಯ ನೆರವು ಕುರಿತಂತೆಯೂ ಚರ್ಚೆ ನಡೆದಿದೆ’ ಎಂದು ಪೋಸ್ಟ್ನಲ್ಲಿ ತಿಳಿಸಲಾಗಿದೆ.
ಇದೇ ವೇಳೆ ಇಸ್ರೇಲ್ ಎನ್ಎಸ್ಎ ಝಾಕಿ ಹನೆಬಿ ಅವರನ್ನೂ ಡೋಬಾಲ್ ಭೇಟಿಯಾದರು. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಈ ಭಾಗದ ಯುಎಇ, ಕತಾರ್, ಸೌದಿ ಅರೇಬಿಯಾ, ಈಜಿಪ್ಟ್ ಮತ್ತು ಜೋರ್ಡಾನ್ನಂತಹ ಪ್ರಮುಖ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಉತ್ತೇಜಿಸುವ ಚರ್ಚೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.