ರಾಜ್ಯದ 5,8,9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಬೇಲಾ ತ್ರಿವೇದಿ ಮತ್ತು ಪಂಕಜ್ ಮಿತ್ತಲ್ ಅವರ ಪೀಠ ಇಂದು ಬೋರ್ಡ್ ಪರೀಕ್ಷೆ ರದ್ದುಗೊಳಿಸುವ ಆದೇಶ ಹೊರಡಿಸಿದೆ.
ಖಾಸಗಿ ಶಾಲಾ ಒಕ್ಕೂಟ ಬೋರ್ಡ್ ಪರೀಕ್ಷೆ ತಡೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಕೈಗೆತ್ತಿಕೊಂಡಿದ್ದ ಪೀಠವು, ವಿಚಾರಣೆ ಪೂರ್ಣಗೊಳ್ಳುವವರೆಗೂ ಪರೀಕ್ಷೆ ನಡೆಸದಂತೆ ಆದೇಶ ನೀಡಿದೆ. ಮಧ್ಯಂತರ ಆದೇಶದ ಮೂಲಕ ಪರೀಕ್ಷೆ ನಡೆಸಲು ಆಗಲ್ಲ ಎಂದು ಪೀಠ ಹೇಳಿದೆ.
ವಿಭಾಗೀಯ ಪೀಠ ಅರ್ಜಿಯ ಸಂಪೂರ್ಣ ವಾದ ಮಂಡಿಸಿ ತೀರ್ಪು ನೀಡುವವರೆಗೂ ಬೋರ್ಡ್ ಎಕ್ಸಾಂ ನಡೆಸಬಾರದು ಎಂದು ತಿಳಿಸಿದೆ. ಇತ್ತ, ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಮಾರ್ಚ್ 13ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ