ತೆಲುಗು ನಟ ರಾಮ್ ಚರಣ್ ಪತ್ನಿ ಉಪಾಸನಾ ತಮ್ಮ ತಾತನ ಜೊತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ರಾಮಲಲ್ಲಾ ಪ್ರತಿಷ್ಠಾಪನೆ ದಿನ ಪತಿ ರಾಮ್ ಚರಣ್ ಮತ್ತು ಮಾವ ಚಿರಂಜೀವಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಉಪಾಸನಾ ಹೋಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ತಾತಾನ ಜೊತೆ ತೆರಳಿ ರಾಮನ ದರ್ಶನ ಪಡೆದಿದ್ದಾರೆ.
ತಾತ ಹಾಗೂ ಕುಟುಂಬದ ಕೆಲ ಸದಸ್ಯರ ಜೊತೆ ಅಯೋಧ್ಯೆಗೆ ತೆರಳಿದ್ದ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ ಬಳಿಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ.
ಅಯೋಧ್ಯೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎನ್ನುವುದು ಉಪಾಸನಾ ಕನಸಾಗಿದೆ. ಅದಕ್ಕಾಗಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದ ಆ ಬಗ್ಗೆ ಉಪಾಸನ ಮಾತುಕತೆ ನಡೆಸಿದ್ದಾರೆ. ಸದ್ಯದಲ್ಲೇ ಆಸ್ಪತ್ರೆಯ ಕೆಲಸವನ್ನು ಶುರು ಕೂಡ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.