ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಪುತ್ರ ಕೆ.ಈ ಕಾಂತೇಶ್ಗೆ ಲೋಕಸಭಾ ಚುನಾವಣೆಯಲ್ಲಿ ಟಿಕೇಟ್ ಕೈತಪ್ಪಿರುವ ಹಿನ್ನೆಲೆ ಈಶ್ವರಪ್ಪ ಅಭಿಮಾನಿಗಳಿಂದ ಮತ್ತು ಬೆಂಬಲಿಗರಿಂದ ಯಡಿಯೂರಪ್ಪ ವಿರುದ್ದ ಪೋಸ್ಟರ್ ವಾರ್ ಶುರುವಾಗಿದೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ಗೆ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೇಟ್ ಕೋರಿ ಮನವಿ ಮಾಡಿಕೊಂಡಿದ್ದರು. ಆದರೇ, ಹೈಕಮಾಂಡ್ ಈ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಘೋಷಣೆ ಮಾಡಿರುವುದು ಈಶ್ವರಪ್ಪ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದವರಲ್ಲಿ ಬಿಎಸ್ ಯಡಿಯೂರಪ್ಪ ಹಾಗು ಕೆ ಎಸ್ ಈಶ್ವರಪ್ಪ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ಮತ್ತು ರಾಘವೇಂದ್ರ ಪಕ್ಷದಲ್ಲಿ ಉನ್ನತ ಸ್ಥಾನಗಳನ್ನು ಪಡೆದಿದ್ದು ಈಶ್ವರಪ್ಪಗೆ ಅನ್ಯಾಯ ಮಾಡಿದ್ದಾರೆ. ಇದರೊಂದಿಗೆ ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಎನ್ನುವಂತಾಗಿದೆ ಎಂದು ಈಶ್ವರಪ್ಪ ಅಭಿಮಾನಿಗಳು ಯಡಿಯೂರಪ್ಪ ವಿರುದ್ದ ನೇರ ಆರೋಪ ಮಡುವ ಮೂಲಕ ಪೋಸ್ಟರ್ ವಾರ್ ಶುರುಮಾಡಿದ್ದಾರೆ.