ಕೆನಡಾದಿಂದ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ ಮೂವರು ಭಾರತೀಯರು ಸೇರಿದಂತೆ ನಾಲ್ಕು ಜನರನ್ನು ನ್ಯೂಯಾರ್ಕ್ ಗಡಿಯಲ್ಲಿ ಬಂಧಿಸಲಾಗಿದೆ.
ಬಫೆಲೊ ನಗರದ ಬಳಿ ಚಲಿಸುತ್ತಿದ್ದ ರೈಲಿನಿಂದ ಅಂತರರಾಷ್ಟ್ರೀಯ ಗಡಿಗೆ ಧುಮುಕಿದ ಓರ್ವ ಮಹಿಳೆ ಸೇರಿ ನಾಲ್ವರನ್ನು ಅಮೆರಿಕ ಗಡಿ ಭದ್ರತಾ ಪಡೆ ಬಂಧಿಸಿದೆ. ಬಂಧಿತರಲ್ಲಿ ಓರ್ವ ಡೊಮಿನಿಕ್ ರಿಪಬ್ಲಿಕ್ ಮೂಲದವನು ಎಂದು ಗೊತ್ತಾಗಿದೆ.
ಗಾಯಗೊಂಡಿದ್ದ ಮಹಿಳೆ ನಡೆಯಲು ಸಾಧ್ಯವಾಗದ್ದರಿಂದ ಆಕೆಯನ್ನು ಅಲ್ಲಿಗೆ ಬಿಟ್ಟು ತೆರಳಾಗಿತ್ತು. ಪೊಲಿಸರು ಆಕೆಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ವಲ್ಪ ಸಮಯದಲ್ಲೇ ಉಳಿದ ಮೂವರನ್ನೂ ಬಂಧಿಸಲಾಗಿದೆ. ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಚಾರಣೆ ವೇಳೆ ಈ ನಾಲ್ವರೂ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ್ದು ದೃಢಪಟ್ಟಿದೆ.
ಉಳಿದ ಮೂವರನ್ನು ವಲಸೆ ಮತ್ತು ರಾಷ್ಟ್ರೀಯತೆ ಕಾಯ್ದೆಯ ಸೆಕ್ಷನ್ 212 ಹಾಗೂ 237 ಅಡಿಯಲ್ಲಿ ಗಡೀಪಾರು ಮಾಡಲು ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.