ಬೆಂಗಳೂರು:-ಹಾವೇರಿ ಟಿಕೆಟ್ ವಿಚಾರಕ್ಕೆ ಬಿಎಸ್ವೈಯನ್ನೂ ದೂರಬಾರದು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹಾವೇರಿ ಲೋಕಸಭಾ ಟಿಕೆಟ್ ವಿಚಾರಕ್ಕೆ ಯಡಿಯೂರಪ್ಪ ಅವರನ್ನು ದೂರಬಾರದು. ಕೇಂದ್ರದ ವರಿಷ್ಠರು ಎಲ್ಲಾ ಸರ್ವೆ ವರದಿಗಳನ್ನು ಪಡೆದು, ನೀನು ನಿಲ್ಲಲೇಬೇಕು ಎಂದು ಸೂಚನೆ ಕೊಟ್ಟಿದ್ದಾರೆ.
ಈ ವೇಳೆ ಪಾರ್ಲಿಮೆಂಟರಿ ಬೋರ್ಡ್ನಲ್ಲೂ ನನ್ನ ಹೆಸರು ಕ್ಲೀಯರ್ ಆಗಿರಲಿಲ್ಲ. ಅಮಿತ್ ಶಾ ಹಾಗೂ ನಡ್ಡಾ ಸಭೆಯಲ್ಲಿ ತೀರ್ಮಾನ ಆಗಿತ್ತು. ಪ್ರಧಾನ ಮಂತ್ರಿ ಏನು ತೀರ್ಮಾನ ಮಾಡ್ತಾರೆ ಅದರಂತೆ ನೀನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದರು. ಅದರಂತೆ ನಾನು ಇವಾಗ ಚುನಾವಣೆ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇನೆ ಎಂದಿದ್ದಾರೆ.
ನನ್ನ ಆರೋಗ್ಯ ಖಂಡಿತವಾಗಿಯೂ ಅಷ್ಟೊಂದು ಚೆನ್ನಾಗಿಲ್ಲ. ಜವಬ್ದಾರಿ ಬಂದಾಗ ಅದನ್ನು ನಿಭಾಯಿಸುವ ಶಕ್ತಿ ನನಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.