ಗಾಝಾದಲ್ಲಿ ಆಹಾರದ ಸಹಾಯಕ್ಕಾಗಿ ಕಾಯುತ್ತಿದ್ದ ಶೆಲ್ ಮೇಲೆ ದಾಳಿ ಮಾಡಿದ ಪರಿಣಾಮ ಘಟನೆಯಲ್ಲಿ ಸುಮಾರು 20 ಜನರು ಮೃತಪಟ್ಟಿದ್ದು 155ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಎನ್ಕ್ಲೇವ್ನಲ್ಲಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.
ಘಟನೆಯು ಭೀಕರವಾಗಿದ್ದು ಶೆಲ್ ದಾಳಿಯಲ್ಲಿ ಇನ್ನಷ್ಟು ಅಧಿಕ ಸಾವು ನೋವುಗಳು ಸಂಭವಿಸಬಹುದು ಎಂದು ಅಲ್ ಶಿಫಾ ಆಸ್ಪತ್ರೆಯ ತುರ್ತು ಘಟಕದಲ್ಲಿ ಕೆಲಸ ಮಾಡುತ್ತಿರುವ ಡಾ.ಮೊಹಮ್ಮದ್ ಘ್ರಾಬ್ ಹೇಳಿದ್ದಾರೆ.
ಗಾಝಾದ ಕುವೈತ್ ವೃತ್ತದಲ್ಲಿ ತಮ್ಮ ಹಸಿವನ್ನು ನೀಗಿಸಲು ಮಾನವೀಯ ಸಹಾಯಕ್ಕಾಗಿ ಕಾಯುತ್ತಿರುವ ನಾಗರಿಕರ ಗುಂಪನ್ನು ಗುರಿಯಾಗಿಸಿಕೊಂಡು ಇಸ್ರೇಲಿ ಆಕ್ರಮಿತ ಪಡೆಗಳು ದಾಳಿ ಮಾಡಿದ ಪರಿಣಾಮ ಈ ದುರಂತ ನಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.