ಕೋಲ್ಕತಾ:- ಹಣೆಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯ ಸರ್ಕಾರ ನಡೆಸುತ್ತಿರುವ ಎಸ್ಎಸ್ಕೆಎಂ ಆಸ್ಪತ್ರೆಯ ನಿರ್ದೇಶಕ ಡಾ.ಮಣಿಮೋಯ್ ಬಂದೋಪಾಧ್ಯಾಯ ಈ ಮಾಹಿತಿ ನೀಡಿದ್ದಾರೆ. ಮನೆಯಲ್ಲಿ ಬಿದ್ದಿದ್ದರಿಂದ ಮುಖ್ಯಮಂತ್ರಿ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಮೂರು ಹೊಲಿಗೆಗಳನ್ನು ಹಾಕಿ ಚಿಕಿತ್ಸೆ ನೀಡಿದ್ದಾರೆ.
ಗಾಯಕ್ಕೆ ಚಿಕಿತ್ಸೆ ನೀಡಿದ ನಂತರ ಮಮತಾ ಬ್ಯಾನರ್ಜಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ವೈದ್ಯರು ಅವರ ಹಣೆಗೆ ಮೂರು ಹೊಲಿಗೆ ಹಾಕಿದ್ದು, ಮೂಗಿಗೆ ಒಂದು ಹೊಲಿಗೆ ಹಾಕಲಾಗಿದ್ದು, ಅಲ್ಲಿಂದಲೂ ಕೂಡ ರಕ್ತ ಬರುತ್ತಿತ್ತು ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ.
ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಸೇರಿದಂತೆ ಹಲವು ನಾಯಕರು ಹಾರೈಸಿದ್ದಾರೆ.