ಯೂಟ್ಯೂಬರ್ ಹಾಗೂ ಬಿಗ್ ಬಾಸ್ ಒಟಿಟಿ ವಿನ್ನರ್ ಎಲ್ವಿಶ್ ಯಾದವ್ನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚೆಗೆ, ನೋಯ್ಡಾ ಪೊಲೀಸರು ಹಾವಿನ ವಿಷದೊಂದಿಗೆ 5 ಜನರನ್ನು ಬಂಧಿಸಿದ್ದರು. ಕಳೆದ ವರ್ಷ, ನೋಯ್ಡಾ ಪೊಲೀಸರು ಸೆಕ್ಟರ್ 39 ರಲ್ಲಿ ಈ ಪ್ರಕರಣದ ಕುರಿತು ಎಫ್ಐಆರ್ ದಾಖಲಿಸಿದ್ದರು, ಇಂದು ಎಲ್ವಿಶ್ ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಅದರ ಬೆನ್ನಲ್ಲಿಯೇ ಅವರನ್ನು ಬಂಧಿಸಲಾಗಿದೆ. ಸ್ವಲ್ಪ ಸಮಯದ ನಂತರ ಎಲ್ವಿಶ್ ಯಾದವ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಘಟನೆ ಹಿನ್ನೆಲೆ : ಕಳೆದ ವರ್ಷ ನವೆಂಬರ್ 8 ರಂದು ನೋಯ್ಡಾ ಪೊಲೀಸರು ರೇವ್ ಪಾರ್ಟಿಯಲ್ಲಿ ಹಾವಿನ ವಿಷವನ್ನು ಬಳಸಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದ್ದರು. ಯೂಟ್ಯೂಬರ್ ಎಲ್ವಿಶ್ ಯಾದವ್ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಪೊಲೀಸರು ಐವರನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.