ಬೆಂಗಳೂರು:- ನಗರದಲ್ಲಿನ ಕುಡಿಯುವ ನೀರಿನ ಹಾಹಾಕಾರ ಸಮಸ್ಯೆ ಕುರಿತು ಇಂದು ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ
ನಗರದಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಸಂಬಂಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಸೂಚಿಸಲಾಗಿದೆ.
ಬೆಂಗಳೂರಿನ ಯಾವ ಯಾವ ವಾರ್ಡ್ನಲ್ಲಿ ಹೆಚ್ಚು ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಗಳು ತೆಗೆದುಕೊಂಡ ಕ್ರಮಗಳ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ.
ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎಷ್ಟರ ಮಟ್ಟಿಗೆ ಬೆಂಗಳೂರಿನಲ್ಲಿ ಇರುತ್ತೆ ಎಂದು ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಸಭೆಯಲ್ಲಿ ಬಿಬಿಎಂಪಿ ಆಯುಕ್ತರು, ನೀರು ಸರಬರಾಜು & ಒಳಚರಂಡಿ ಮಂಡಳಿ ಅಧ್ಯಕ್ಷರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.