ಬೆಂಗಳೂರು:– ಮೊಬೈಲ್ ಶಾಪ್ ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್ ಗೆ ಸಂಬಧಪಟ್ಟಂತೆ ಐವರನ್ನು ಹಲಸೂರುಗೇಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಗರತ್ಪೇಟೆಯಲ್ಲಿರುವ ಮೊಬೈಲ್ ಶಾಪ್ನಲ್ಲಿ ಯುವಕ ಹುನುಮಾನ್ ಚಾಲಿಸಾ ಅನ್ನು ಜೋರು ಸೌಂಡ್ ಇಟ್ಟು ಹಚ್ಚಿದ್ದರು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್ ಅವರ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದರು.
ಗ್ಯಾಂಗ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು ಗಾಯಗೊಂಡ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಪೊಲೀಸ್ ಕಸ್ಟಡಿಯಲ್ಲಿದ್ದು, ಐವರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.