ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಘೋಷಿತ ಅಭ್ಯರ್ಥಿಗಳು ಮತಬೇಟೆ ಚಟುವಟಿಕೆಗಳನ್ನು ಜೋರಾಗಿಯೇ ಶುರುಮಾಡಿದ್ದಾರೆ. ತಮ್ಮ ಕ್ಷೇತ್ರದ ಪ್ರಭಾವಿತರ ಮನೆ ಮನೆಗೆ ತೆರಳುತ್ತಿರುವ ಅಭ್ಯರ್ಥಿಗಳು ಚುನಾವಣೆಗೆ ಸಹಕಾರ ನೀಡುವಂತೆ ಕೇಳುತ್ತಿದ್ದಾರೆ. ಅಂತೆಯೇ ಸಂಸದೆ ಶೋಭಾ ಕರಂದ್ಲಾಜೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರನ್ನು ಭೇಟಿ ಮಾಡಿ ಸಹಕಾರ ಕೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ, ನಮ್ಮ ಪಕ್ಷಕ್ಕೆ ಅವರ ಸಹಕಾರ ಕೇಳಿದ್ದೇವೆ. ಅಶ್ವಿನಿ ಅವರಿಗೆ ರಾಜಕೀಯ ಪಾರ್ಟಿ ಇಲ್ಲ. ಹಾಗಾಗಿ ನಿಮ್ಮ ಸಹಕಾರ, ಬೆಂಬಲ ಬೇಕು ಅಂತ ಕೇಳಿದ್ದೇವೆ. ಅವ್ರು ನಮ್ಮದೇ ಕ್ಷೇತ್ರದಲ್ಲಿದ್ದಾರೆ. ಪ್ರಚಾರದ ಬಗ್ಗೆ ಕೇಳಿಲ್ಲ’ ಎಂದಿದ್ದಾರೆ.
ರಾಜಕಾರಣದ ವಿಚಾರದಲ್ಲಿ ಪುನೀತ್ ಯಾವತ್ತಿಗೂ ಹಿಂದೇಟು ಹಾಕುತ್ತಲೇ ಇದ್ದರು. ಸ್ವತಃ ಶಿವರಾಜ್ ಕುಮಾರ್ ಪತ್ನಿ ಚುನಾವಣೆಗೆ ನಿಂತಾಗಲೂ ಅವರು ಸಪೋರ್ಟ್ ಮಾಡಲಿಲ್ಲ. ರಾಜಕಾರಣದಿಂದ ಅಂತರ ಕಾಪಾಡಿಕೊಂಡೇ ಬಂದರು. ಅಶ್ವಿನಿ ಅವರು ಕೂಡ ಅದೇ ಹಾದಿಯಲ್ಲಿ ನಡೆಯುತ್ತಿದ್ದಾರೆ.
ಮತ್ತೊಂದೆಡೆ ಶಿವರಾಜ್ ಕುಮಾರ್ ಪತ್ನಿ ಗೀತಾ ಕೂಡ ಈ ಬಾರಿ ಲೋಕಸಭೆಯ ಕಣದಲ್ಲಿ ಇದ್ದಾರೆ. ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ನಟ ಶಿವರಾಜ್ ಕುಮಾರ್ ಪತ್ನಿಗೆ ಬೆಂಬಲವಾಗಿ ನಿಂತಿದ್ದಾರೆ.